ಯತ್ನಾಳರ ಬ್ಯಾನರ್ ಹರಿದವರನ್ನು ಬಂಧಿಸಿ: ಪಾಲಿಕೆ ಸದಸ್ಯರಿಂದ ಪ್ರೊಟೆಸ್ಟ್

ದಿಗಂತ ವರದಿ ವಿಜಯಪುರ:

ಗಣೇಶೋತ್ಸವ ನಿಮಿತ್ತ ಅಳವಡಿಸಲಾಗಿದ್ದ ಗಣೇಶ, ಶಿವಾಜಿ ಮಹಾರಾಜರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮಹಾನಗರ ಪಾಲಿಕೆ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಯತ್ನಾಳರ ಬೃಹತ್ ಬ್ಯಾನರ್‌ನ್ನು ಕಿಡಿಗೇಡಿಗಳು ಹರಿದು ಹಾಕಿರುವುದು ಖಂಡನೀಯ. ಬ್ಯಾನರ್ ಹರಿದು ಹಾಕಿ, ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭ ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ಕಿರಣ ಪಾಟೀಲ, ರಾಜು ಕುರಿಯವರ ಸೇರಿದಂತೆ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!