ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ವಿರುದ್ಧ ಗ್ವಾಲಿಯರ್ ಎಂಪಿ-ಎಂಎಲ್‌ಎ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.
ಗ್ವಾಲಿಯರ್‌ನ ಜೆಎಂಎಫ್‌ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಷೇಕ್ ಮೆಹ್ರೋತ್ರಾ ತಿಳಿಸಿದ್ದಾರೆ.
1995-97ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ವಿಚಾರಣೆಗೆ ಲಾಲು ಪ್ರಸಾದ್ ಯಾದವ್ ಸೇರಿದಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.