ಬಾಲಿವುಡ್ ನಟಿ ಜರೀನ್ ಖಾನ್‌ಗೆ ಅರೆಸ್ಟ್ ವಾರೆಂಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಬಾಲಿವುಡ್ (Bollywood) ನಟಿ ಜರೀನ್ ಖಾನ್‌ಗೆ (Zareen Khan) ವಂಚನೆ ಪ್ರಕರಣದಲ್ಲಿ ಕೋಲ್ಕತಾ ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ.

2018ರಲ್ಲಿ ಕೋಲ್ಕತಾದಲ್ಲಿ ಆಯೋಜಿಸಿದ್ದ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ಜರೀನ್‌ಗೆ ಆಹ್ವಾನ ನೀಡಲಾಗಿತ್ತು. ಈ ಸಮಾರಂಭಕ್ಕಾಗಿ ಸಂಭಾವನೆ ಕೂಡ ನೀಡಲಾಗಿತ್ತು. ಆದರೆ ಅಂದು ನಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ವಿಚಾರವಾಗಿ ನಟಿಯ ವಿರುದ್ದ ಆಯೋಜಕರು ಎಫ್‌ಐಆರ್ ದಾಖಲಿಸಿದ್ದರು. 2018ರಿಂದ ದಾಖಲಾದ ಪ್ರಕರಣದ ಕುರಿತು ನಟಿ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ.

ಇದೀಗ ಅರೆಸ್ಟ್ ವಾರೆಂಟ್ ಕುರಿತು ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರಲ್ಲಿ ಸತ್ಯವಿಲ್ಲ. ಈ ಬಗ್ಗೆ ನನ್ನ ವಕೀಲರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!