ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದೇಶದಲ್ಲಿರುವ ಪ್ರಜ್ವಲ್ ಸೆರೆಗೆ ಎಸ್ಐಟಿ ಅರೆಸ್ಟ್ ವಾರಂಟ್ ಪಡೆದಿದೆ. ಜತೆಗೆ ಪಾಸ್ಪೋರ್ಟ್ ಕ್ಯಾನ್ಸಲ್ ಮಾಡಲು ಕೂಡ ಕೋರ್ಟ್ ಅನುಮತಿ ನೀಡಿದೆ.
ನಗರದ 42ನೇ ಎಸಿಎಂಎಂ ಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊರಡಿಸಿದ್ದ ನೋಟಿಸ್ಗಳ ಬಗ್ಗೆ ಕೋರ್ಟ್ ಮಾಹಿತಿ ಕೇಳಿತ್ತು. ಈ ವೇಳೆ ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್ಐಟಿ, ಬಂಧನಕ್ಕೆ ಚಾರ್ಜ್ ಶೀಟ್ ಅವಶ್ಯಕತೆ ಇಲ್ಲ ಎಂದು ಕೋರ್ಟ್ಗೆ ಮನವರಿಕೆ ಮಾಡಿತ್ತು. ಹೀಗಾಗಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಇದೀಗ ಅರೆಸ್ಟ್ ವಾರಂಟ್ ಲಭಿಸಿರುವುದರಿಂದ ಸಿಬಿಐ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ. ರೆಡ್ ಕಾರ್ನರ್ ನೋಟಿಸ್ ಬಳಿಕ ಪ್ರಜ್ವಲ್ ಪಾಸ್ಪೋರ್ಟ್ ರದ್ದು ಆಗಲಿದ್ದು, ಇದರಿಂದ ಬಂಧನಕ್ಕೆ ಸಹಕಾರಿಯಾಗಲಿದೆ.
ರೆಡ್ ಕಾರ್ನರ್ ನೋಟಿಸ್ ಎನ್ನುವುದು ಹಸ್ತಾಂತರ, ಶರಣಾಗತಿ ಅಥವಾ ಅಂತಹುದ್ದೇ ಕಾನೂನು ಕ್ರಮಕ್ಕೆ ಬಾಕಿ ಇರುವ ವ್ಯಕ್ತಿಯನ್ನು ಪತ್ತೆಹಚ್ಚಲು ಮತ್ತು ತಾತ್ಕಾಲಿಕವಾಗಿ ಬಂಧಿಸುವುದಕ್ಕೆ ವಿಶ್ವಾದ್ಯಂತ ಕಾನೂನು ಜಾರಿಗೊಳಿಸಲು ಮಾಡುವ ವಿನಂತಿಯಾಗಿದೆ.