ಐಪಿಎಸ್‌ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಅಕೌಂಟ್‌ ಓಪನ್‌ ಮಾಡಿದವ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಪಿಎಸ್ ​ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿ ಆರೋಪಿಯನ್ನು ಬೆಳಗಾವಿ ಜಿಲ್ಲಾ ಸಿಇಎನ್ ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಅರ್ಬಾಜ್ ಖಾನ್​ ಬಂಧಿತ ಆರೋಪಿ.

ಆರೋಪಿ ಅರ್ಬಾಜ್ ಖಾನ್ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್, ಗದಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನೇಮಗೌಡ, ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿದ್ದನು.

ಅಧಿಕಾರಿಗಳ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದನು. ಬಳಿಕ, ಹುಟ್ಟಿದ ಹಬ್ಬ ಇದೆ ಅಂತ ಪೋಸ್ಟ್ ಹಾಕುತ್ತಿದ್ದನು. ಶುಭಾಶಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್​ಪಿ ಕೇಸ್ ದಾಖಲಿಸಿಕೊಂಡರು. ಬಳಿಕ, ಆರೋಪಿಯನ್ನು ಸೆರೆ ಹಿಡಿಯಲು ಸಿಪಿಐ ಸುನೀಲ್ ನಂದೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದರು. ಪೊಲೀಸರು ತನಿಖೆ ನಡೆಸಿ, ಅರ್ಬಾಜ್ ಖಾನ್​ನನ್ನು ಬಂಧಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!