ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಗೆ ಮದ್ಯ ಕುಡಿಸಿ ಹಾಡಹಗಲೇ ಫುಟ್ಪಾತ್ ನಲ್ಲಿ ಅತ್ಯಾಚಾರ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ವರದಿಯಾಗಿದ್ದು, ಇಲ್ಲಿನ ಕೊಯ್ಲಾ ಫಾಟಕ್ ಪ್ರದೇಶದಲ್ಲಿ ದುಷ್ಕರ್ಮಿಯೋರ್ವ ಮಹಿಳೆಗೆ ಮದ್ಯಪಾನ ಮಾಡಿಸಿ ಆಕೆಯನ್ನು ಫುಟ್ ಪಾತ್ ಮೇಲೆ ಹಗಲು ಹೊತ್ತಿನಲ್ಲೇ ಅತ್ಯಾಚಾರವೆಸಗಿದ್ದಾನೆ.
ದುಷ್ಕರ್ಮಿಯ ಕೃತ್ಯವನ್ನು ದಾರಿಹೋಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಮಾತ್ರವಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದ್ದು, ದುಷ್ಕರ್ಮಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಲೇ ಎಚ್ಚೆತ್ತ ಉಜ್ಜಯಿನಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತ ಅದೇ ರಸ್ತೆಯಲ್ಲಿ ತಳ್ಳುಗಾಡಿಯಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಸ್ಪಿ ಪ್ರದೀಪ್ ಶರ್ಮಾ ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸಲು ಸೂಚನೆ ನೀಡಿದ್ದರು. ಅದರಂತೆ ತನಿಖೆ ನಡೆಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
‘ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಆಕೆಗೆ ಮದ್ಯ ಕುಡಿಸಿ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಘಾತಕಾರಿ ಸಂಗತಿಯೆಂದರೆ, ಅಪರಾಧವನ್ನು ನಿಲ್ಲಿಸುವ ಬದಲು, ಹಾದುಹೋಗುತ್ತಿದ್ದ ಕೆಲವರು ಅಪರಾಧದ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ’ ಎಂದು ಪೊಲೀಸರು ಹೇಳಿದ್ದಾರೆ.
A woman scrap collector was allegedly raped by a man in #Ujjain, #MadhyaPradesh, after he coerced her into consuming liquor. pic.twitter.com/nEwnCO2Fvi
— preeti kaur (@preetikaur69) September 6, 2024