August 17, 2026
Monday, August 17, 2026
spot_img

ಅತ್ಯಾಚಾರ ಆರೋಪದಲ್ಲಿ ಬಂಧನ: ಪೊಲೀಸರಿಗೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಿದ ಪಂಜಾಬ್‌ನ ಆಪ್ ಶಾಸಕ ಪೊಲೀಸರು ಕರೆದೊಯ್ಯುವಾಗ ಹರಿಯಾಣದ ಕರ್ನಾಲ್ ಬಳಿ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರರನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ ಅವರನ್ನು ಕರೆದೊಯ್ಯುತ್ತಿದ್ದಾಗ ಕಾರಿನಲ್ಲಿ ಬಂದ ಅವರ ಬೆಂಬಲಿಗರು ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದು, ಬಳಿಕ ಹರ್ಮೀತ್ ಸಿಂಗ್, ತಮ್ಮ ಬೆಂಬಲಿಗರು ಬಂದಿದ್ದ ಸ್ಕಾರ್ಪಿಯೋ, ಎಸ್‌ಯುವಿಯಲ್ಲಿ ಪರಾರಿಯಾಗಿದ್ದಾರೆ.

ಇದೀಗ ಪೊಲೀಸರು ಫಾರ್ಚೂನರ್ ಅನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಶಾಸಕ ಇನ್ನೊಂದು ಕಾರಿನಲ್ಲಿದ್ದಿದ್ದರಿಂದ ಎಸ್ಕೇಪ್ ಆಗಿದ್ದಾರೆ. ಇದೀಗ ಶಾಸಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಜಿರಾಕ್‌ಪುರದ ಮಹಿಳೆಯ ನೀಡಿದ ದೂರಿನಾಧಾರವಾಗಿ ಶಾಸಕ ಹರ್ಮೀತ್ ಸಿಂಗ್ ವಿರುದ್ಧ ಅತ್ಯಾಚಾರ, ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣದಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !