ಅರೆಸ್ಟ್‌ ಆದ ಕಾಮುಕನ ಫೋನ್‌ನಲ್ಲಿತ್ತು ಮಹಿಳೆಯರ ಅಶ್ಲೀಲ ಫೋಟೋ.. ನಂಬರ್ ಕೇಳಿದ್ರೆ ನೀವೇ ಶಾಕ್ ಆಗ್ತೀರಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಕಲಿ ಖಾತೆ ಸೃಷ್ಟಿಸಿ ಮಹಿಳೆಯರ ಅಶ್ಲೀಲ ಫೋಟೊ ಮತ್ತು ವೀಡಿಯೊಗಳನ್ನು ಇಟ್ಟುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಗಳನ್ನು ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಕಾಮುಕನನ್ನು ಮುಂಬೈ ಪೊಲೀಸರು ಸಂಡೂರಿನಲ್ಲಿ ಬಂಧಿಸಿದ್ದಾರೆ.

ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ ಆರೋಪಿ. ದೆಹಲಿಯ ಕಂಪ್ಯೂಟರ್ ಸಾಫ್ಟ್‌ಸ್ಟಿಲ್ಸ್‌ನಲ್ಲಿ ಡಿಪ್ಲೋಮಾ ಪಡೆದಿದ್ದ ಆರೋಪಿ ಸಂಡೂರಿನ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.

ಮುಂಬೈನಲ್ಲಿ ಹುಡುಗಿಯೊಬ್ಬಳು ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ಬಳಸಿಕೊಂಡು ಯಾರೋ ತನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸ್ ದೂರು ದಾಖಲಿಸಿದ ನಂತರ, ಮಹಾರಾಷ್ಟ್ರ ಸೈಬರ್ ಪೊಲೀಸರು ತನಿಖೆ ಪ್ರಾರಂಭಿಸಿದರು. ತಾಂತ್ರಿಕ ಪುರಾವೆ ಸಂಗ್ರಹಿಸಿ ಬ್ಲ್ಯಾಕ್‌ಮೇಲರ್‌ನ ಸ್ಥಳವನ್ನು ಪತ್ತೆಹಚ್ಚಿದ ನಂತರ, ಶುಭಂ ಕುಮಾರ್ ನನ್ನು ಬಂಧಿಸಿ, ನಾಲ್ಕು ಸ್ಮಾರ್ಟ್‌ಫೋನ್‌ಗಳು ಮತ್ತು ಕಂಪ್ಯೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅದರಿಂದ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡೋದೇ ಇವನ ಕೆಲಸವಾಗಿತ್ತು. ಈವರೆಗೂ ಒಟ್ಟು 20ಕ್ಕೂ ಹೆಚ್ಚು ನಕಲಿ ಖಾತೆಗಳು ಮತ್ತು 100 ಇಮೇಲ್ ಐಡಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ತನಿಖೆ ವೇಳೆ, ಮಹಿಳೆಯರಿಗೆ ನಗ್ನವಾಗಿ ವಿಡಿಯೋ ಕರೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ. ಮಹಿಳೆಯರು ಒಪ್ಪದೇ ಇದ್ದಾಗ ನಕಲಿ ಖಾತೆ ಸೃಷ್ಟಿ ಮಾಡಿ, ಮಾನಹಾನಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಆರೋಪಿಯ ಮೊಬೈಲ್‌ನಿಂದ ಮಹಿಳೆಯರ 13,500 ಅಶ್ಲೀಲ ದೃಶ್ಯಗಳಿರುವ ಸ್ಕ್ರೀನ್ ಶಾಟ್‌ಗಳನ್ನು ರಿಕವರಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!