ದಿಗಂತ ವರದಿ ಕೊಪ್ಪಳ:
ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಸಂಬಂಧ ಬಸಾಪುರ ಲಘು ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು ಆಗಮಿಸಿದರು.
ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಸಿದ್ದರಾಮಯ್ಯ ಅವರು, ಕಾರು ಮೂಲಕ ರಸ್ತೆ ಮಾರ್ಗದಿಂದ ವಿಜಯಪುರಕ್ಕೆ ತೆರಳಲಿದ್ದಾರೆ. ಮಾಜಿ ಸಂಸದ ಸಂಗಣ್ಣ ಕರಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಪಾಟೀಲ್ ಸೇರಿ ಮತ್ತಿತರರಿದ್ದರು.