ಭಾರತಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಸಾಜಿದಾ ಮೊಹಮ್ಮದ್ ಆಗಮನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ತಮ್ಮ ಮೊದಲ ದ್ವಿಪಕ್ಷೀಯ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ.

ಈ ಭೇಟಿಯ ವೇಳೆ ಅಧ್ಯಕ್ಷ ಮುಯಿಝು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಅವರನ್ನು ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಸ್ವಾಗತಿಸಿದರು. ದ್ರೌಪದಿ ಮುರ್ಮು ಅವರ ಅಧಿಕೃತ ಆಹ್ವಾನದ ಮೇರೆಗೆ ಅಕ್ಟೋಬರ್ 6-10 ರವರೆಗೆ ಮುಯಿಝು ಅವರು ಭಾರತ ಭೇಟಿಗೆ ಆಗಮಿಸಿದ್ದಾರೆ.

“ನಾನು ಆದಷ್ಟು ಬೇಗ ಭಾರತಕ್ಕೆ ಭೇಟಿ ನೀಡಲು ಯೋಜಿಸುತ್ತಿದ್ದೇನೆ… ನಾವು ಅತ್ಯಂತ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದೇವೆ” ಎಂದು ಮುಯಿಝು ಈ ಹಿಂದೆ ತಿಳಿಸಿದ್ದರು.

ಈ ಜೂನ್‌ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮುಯಿಝು ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತಿರುವುದು ಇದು ಗಮನಾರ್ಹವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!