ಕೊಡಗಿನಲ್ಲಿ ವರುಣನ ಆಗಮನ, ಬೆಂಗಳೂರಿನಲ್ಲಿ ಮಳೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ಜನ ಹೈರಾಣಾಗಿದ್ದು, ಸದ್ಯ ಕೊಡಗಿನ ಹಲವೆಡೆ ಬುಧವಾರ ಸಾಮಾನ್ಯ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

ರಾಜಧಾನಿ ಬೆಂಗಳೂರಿನ ವಾತಾವರಣವೂ ತಣ್ಣಗಾಗಿದ್ದು, ಮಳೆ ಸಾಧ್ಯತೆ ಇಲ್ಲ. ಮಾರ್ಚ್ 20 ರ ನಂತರ ಮಡಿಕೇರಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!