ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಹಗರಣದಲ್ಲಿ (Delhi Excise Policy Case) ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ( Delhi CM Arvind Kejriwal) ಅವರನ್ನು ಇಡಿ (ED) ಬಂಧಿಸಿದೆ. ಈ ಬೆನ್ನಲ್ಲೇ ಕೇಜ್ರಿವಾಲ್ ಪತ್ನಿ ಸುನೀತಾ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರದ ದುರಹಂಕಾರದಿಂದ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ ಎಂದು ಕೇಜ್ರಿವಾಲ್ ಪತ್ನಿ ಸುನೀತಾ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ‘X'(ಎಕ್ಸ್) ಮೂಲಕ ಸುನಿತಾ ಪ್ರತಿಕ್ರಿಯೆ ನೀಡಿದ್ದು, ನಿಮ್ಮಿಂದ(ಜನರಿಂದ) ಮೂರು ಬಾರಿ ಆಯ್ಕೆಯಾದ ಮುಖ್ಯಮಂತ್ರಿಯನ್ನು ಅಧಿಕಾರದ ದುರಹಂಕಾರದಿಂದ ಮೋದಿ ಬಂಧಿಸಿದ್ದಾರೆ. ನರೇಂದ್ರ ಮೋದಿ ಎಲ್ಲರನ್ನೂ ನಾಶ ಮಾಡಲು ಯತ್ನಿಸುತ್ತಿದ್ದಾರೆ. ಇದು ದೆಹಲಿ ಜನತೆಗೆ ಮಾಡಿದ ದ್ರೋಹ ಎಂದು ಕಿಡಿ ಕಾರಿದ್ದಾರೆ.
‘ನಿಮ್ಮ ಮುಖ್ಯಮಂತ್ರಿ ಸದಾ ನಿಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಅವರ ಜೀವನವು ಒಳಗೂ ಹೊರಗೂ ದೇಶಕ್ಕೆ ಮುಡಿಪಾಗಿತ್ತು. ಸಾರ್ವಜನಿಕರಿಗೆ ಎಲ್ಲವೂ ಗೊತ್ತು’ ಎಂದಿರುವ ಸುನಿತಾ ಕಡೆಗೆ, ಜೈ ಹಿಂದ್ ಎಂದು ಪ್ರತಿಕ್ರಿಯಿಸಿದ್ದಾರೆ.