ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸದಾಗಿ ಚುನಾಯಿತವಾದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ 370 ನೇ ವಿಧಿ ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವ ನಿರ್ಣಯವನ್ನು ವಿರೋಧಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್-ಎನ್‌ಸಿ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕ್ರಮವನ್ನು ಕಾಶ್ಮೀರದ ವಿರುದ್ಧದ ಪಿತೂರಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರದ ಧುಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಮತ್ತು I.N.D.I.A ಮೈತ್ರಿಕೂಟಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಅವಕಾಶ ಸಿಕ್ಕ ತಕ್ಷಣ ಅವರು ಕಾಶ್ಮೀರದ ವಿರುದ್ಧ ತಮ್ಮ ಪಿತೂರಿಗಳನ್ನು ಪ್ರಾರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು, ಬಿಜೆಪಿಯನ್ನು ಹೊರತುಪಡಿಸಿ ಎಲ್ಲಾ ಪಕ್ಷಗಳು ಅದನ್ನು ಬೆಂಬಲಿಸಿದವು.