ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮರುಸ್ಥಾಪನೆ ನಿರ್ಣಯ ಅಂಗೀಕಾರ: ಬಿಜೆಪಿಯಿಂದ ವಿರೋಧ, ಮೊಳಗಿದ ಜೈ ಶ್ರೀರಾಮ್‌ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಮರುಸ್ಥಾಪನೆ ವಿಚಾರ ವಿಧಾನಸಭೆಯಲ್ಲಿ ಕೋಲಾಹಲವನ್ನೇ ಸೃಷ್ಟಿಯಾಗಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಯ ನಡುವೆಯೇ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ನೇತೃತ್ವದ ಸರಕಾರ ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸುವ ನಿರ್ಣಯವನ್ನು ಅಂಗೀಕರಿಸಿದೆ.

ಇಂದು ಜಮ್ಮು-ಕಾಶ್ಮೀರ ಸದನ ಸಭೆಯ ನಂತರ ನ್ಯಾಶನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮತ್ತು ಡಿಸಿಎಂ ಸುರೀಂದರ್ ಸಿಂಗ್ ಚೌಧರಿ ಅವರು ಸಂವಿಧಾನ ಪರಿಚ್ಛೇದ 370 ಮರುಸ್ಥಾಪನೆ ಕುರಿತು ನಿರ್ಣಯವನ್ನು ಮಂಡಿಸಿದರು. ನಿರ್ಣಯ ಮಂಡಣೆಯಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿದ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಿಜೆಪಿ ಶಾಸಕರು “ಆಗಸ್ಟ್ 5 ಜಿಂದಾಬಾದ್”, “ಜೈ ಶ್ರೀ ರಾಮ್”, “ವಂದೇ ಮಾತರಂ”, “ದೇಶ ವಿರೋಧಿ ಅಜೆಂಡಾ ನಹೀ ಚಲೇಗಾ”, “ಜಮ್ಮು ವಿರೋಧಿ ಅಜೆಂಡಾ ನಹೀ ಚಲೇಗಾ”, “ಪಾಕಿಸ್ತಾನಿ ಅಜೆಂಡಾ ನಹೀ ಚಲೇಗಾ” ಘೋಷಣೆಗಳನ್ನು ಕೂಗಿದರು. ಕೊನೆಗೆ ಸ್ಪೀಕರ್ ಅಬ್ದುರ್ ರಹೀಮ್ ರಾಥರ್ ಕಲಾಪವನ್ನು ಮುಂದೂಡಿದರು.

https://x.com/AmarUjalaNews/status/1854071224042959044?ref_src=twsrc%5Etfw%7Ctwcamp%5Etweetembed%7Ctwterm%5E1854071224042959044%7Ctwgr%5Ede4c0ea6052d8ab713f42f0ef6f3b20c381c82ca%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fforyou%3Fmode%3Dpwaaction%3Dclicklaunch%3Dtrue

ಐದು ವರ್ಷಗಳ ಹಿಂದೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮತ್ತು ಸವಲತ್ತುಗಳನ್ನು ನೀಡುವ 370 ನೇ ವಿಧಿಯನ್ನು ಹಿಂತೆಗೆದುಕೊಂಡಿತು. ಈ ಕ್ರಮವು ಕಾನೂನು ಸಮರಕ್ಕೆ ಕಾರಣವಾಗಿತ್ತು. ಮತ್ತು ಕಳೆದ ವರ್ಷದ ಡಿಸೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ 370 ನೇ ವಿಧಿಯನ್ನು “ತಾತ್ಕಾಲಿಕ” ನಿಬಂಧನೆ ಎಂದು ಪರಿಗಣಿಸಿ, ರದ್ದುಗೊಳಿಸುವಿಕೆಯನ್ನು ಎತ್ತಿಹಿಡಿದಿತ್ತು.

ಆರ್ಟಿಕಲ್‌ 370 ರದ್ದು ಮಾಡಿದ ನಂತರ ಜಮ್ಮು ಮತ್ತು ಕಾಶ್ಮೀರವನ್ನು ಪುನರ್ರಚಿಸಲಾಗಿತ್ತು. ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಇದಕ್ಕೆ ಜಮ್ಮು-ಕಾಶ್ಮೀರ ಜನಪ್ರತಿನಿಧಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇನ್ನು ಒಮರ್ ಅಬ್ದುಲ್ಲಾ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಎರಡೇ ದಿನದಲ್ಲಿ ಕರೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆಯ ನಿರ್ಣಯವನ್ನು ಅಂಗೀಕರಿಸಿತ್ತು. ನಿರ್ಣಯದ ಕರಡನ್ನು ಸಿದ್ಧಪಡಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಿದ್ದರು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!