ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಹುದೊಡ್ಡ ಸವಾಲಾದ ಟ್ರಾಫಿಕ್ ನಿರ್ವಹಣೆಗೆ ಕೃತಕ ಬುದ್ದಿಮತ್ತೆ ಬಳಸಲು ಸರ್ಕಾರ ತೀರ್ಮಾನಿಸಿದೆ.
150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ಗಳನ್ನು ಅಭಿವೃದ್ಧಿ ಮಾಡಲಾಗುತ್ತಿದ್ದು, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೂಲಕ ಟ್ರಾಫಿಕ್ ಸಿಗ್ನಲ್‌ಗಳ ನಿರ್ವಹಣೆ ಮಾಡಲಾಗುತ್ತದೆ.
ಸೀಮ್‌ಲೆಸ್ ಸಿಗ್ನಲಿಂಗ್ ಮೂಲಕ ಸಂಚಾರ ದಟ್ಟಣೆಗೆ ಕ್ರಮ ಕೈಗೊಳ್ಳಲಾಗುವುದು, ಕೆಆರ್ ಪುರಂನ ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ರೂ ವೆಚ್ಚದಲ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.