Wednesday, July 6, 2022

Latest Posts

ಅಪಘಾತ ತಡೆಯಲು KSRTC ಬಸ್​ಗಳಲ್ಲಿ ಆರ್ಟಿಫಿಶಿಯಲ್ ಟೆಕ್ನಾಲಜಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದೆ.
ಇದರಲ್ಲಿ ಎರಡು ರೀತಿಯ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ. ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್. ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್. ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ. ಮತ್ತೊಂದು ವಾಹನ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್​ಗೆ ಮಾಹಿತಿ ರವಾನೆ ಮಾಡುತ್ತದೆ. ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.
ವಿನೂತನ ಪ್ರಯೋಗ
ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಅಂತ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದಾರೆ. ನಮಗೆ ನಮ್ಮ ಜನರ ಜೀವ ಮುಖ್ಯ. ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1,044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss