Saturday, June 10, 2023

Latest Posts

ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನಕ್ಕೆ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್ ಡೆಸ್ಕ್

ಜಾನಪದ ಗಾಯಕ, ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ನಿರಂತರ ಪ್ರಯತ್ನ ನಿರಂತರವಾಗಿ ಮಾಡುತಿದ್ದ ಹಿರಿಯ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನರಾಗಿದ್ದಾರೆ.

ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ಆ ಭಗವಂತ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳು ಕಂಬನಿ ಮಿಡಿದಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಅಭಿನವ ಶರೀರಂಥ ಅನೇಕ ಪುರಸ್ಕಾರಗಳಿಗೆ ಪಾತ್ರರಾಗಿದ್ದ ಬಸಲಿಂಗಯ್ಯ ಅವರ ನಿಧನದಿಂದ ಕನ್ನಡ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ವರ್ಗದವರಿಗೆ ಭಗವಂತ ನೀಡಲಿ ಎಂದು ಜೋಶಿ ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!