ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅರುಣ್ ಗೋಯಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರು ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇಂದು ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಚುನಾವಣಾ ಸಮಿತಿ ತಿಳಿಸಿದೆ. ಪಂಜಾಬ್ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಶನಿವಾರ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ನಿರ್ದೇಶನದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯವು ಗೋಯಲ್ ಅವರ ನೇಮಕವನ್ನು ಸೂಚಿಸಿದೆ. 1985ರ ಬ್ಯಾಚ್‌ನಲ್ಲಿ ಐಎಎಸ್ ಅಧಿಕಾರಿಯಾಗಿದ್ದ ಗೋಯಲ್ ಅವರು ನ.18ರಂದು ಸ್ವಯಂ ನಿವೃತ್ತಿ ಪಡೆದರು. ಇದೀಗ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!