ಶಹಬಾದ್ ಠಾಣಾ ವ್ಯಾಪ್ತಿಗೆ ಅರುಣ್ ಕುಮಾರ್ ಪುತ್ತಿಲ ಗಡಿಪಾರು: ವಿಚಾರಣೆಗೆ ಜೂ.6 ದಿನ ನಿಗದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್‌ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂ.6ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!