ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್: ಇಂದಿನಿಂದ ನಡೆಯಲಿದೆ ಕೋರ್ ಕಮಿಟಿ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಈ ಮೂಲಕ ಮೂರು ಹಂತದ ಸಭೆ ನಿಗದಿ ಮಾಡಿಕೊಂಡಿದ್ದಾರೆ.
ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಸಭೆ ನಡೆಸಲಿದ್ದು, ಸಂಪುಟ ಸದಸ್ಯರಿಂದ ಪ್ರಸ್ತುತ ರಾಜ್ಯದಲ್ಲಿನ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಲಿದ್ದಾರೆ‌.
ರಾಜ್ಯ ಬಿಜೆಪಿಯಲ್ಲಿನ ಗೊಂದಲ, ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಲಿದ್ದಾರೆ.
ನಾಳೆ ಇಡೀ ದಿನ ಶಾಸಕರಿಗಾಗಿಯೇ ಅರುಣ್ ಸಿಂಗ್ ಸಮಯ ಮೀಸಲಿರಿಸಿದ್ದಾರೆ. ಸಂಸದರು, ಶಾಸಕರು,ಪರಿಷತ್ ಸದಸ್ಯರು ಯಾರೇ ಆದರೂ ಮುಕ್ತವಾಗಿ ಬಂದು ಚರ್ಚೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಒಬ್ಬೊಬ್ಬರಾಗಿ ಪ್ರತ್ಯೇಕವಾಗಿ ಬಂದೇ ಮಾತುಕತೆ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss