Wednesday, July 6, 2022

Latest Posts

150 ಸೀಟುಗಳ ಗೆಲುವಿಗೆ ಸಂಕಲ್ಪ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ದಿಗಂತ ವರದಿ ಹುಬ್ಬಳ್ಳಿ:

2023ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳ ಗೆಲುವಿಗೆ ಸಂಕಲ್ಪ ಮಾಡಿದ್ದೇವೆ. ಸಂಕಲ್ಪ ಈಡೇರಿಸಲು ಪ್ರಯತ್ನಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ನಗರದಲ್ಲಿ ಆಯೋಜನೆಯಾಗಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಎರಡನೇ ದಿನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗಲು ನಿರ್ಧರಿಸಿದ್ದು, 150 ಸ್ಥಾನಗಳಲ್ಲಿ ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದರು.

ಕಾರ್ಯ ಕಾರಿಣಿ ಯಶಸ್ವಿಯಾಗಿ ನಡೆದಿದ್ದು, ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಪಕ್ಷ ಬಲಪಡಿಸುವ ಕುರಿತು ಚರ್ಚಿಸಲಾಗಿದೆ ಎಂದರು. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಿರಂತರ ಹಿಂದೂಗಳ ಹತ್ಯೆ ನಡೆದಿದೆ. ಪಿಎಫ್ಐಗೆ ಕುಮ್ಮಕ್ಕು ನೀಡಲಾಗಿತ್ತು. ಭ್ರಷ್ಟಾಚಾರದ ಕುರಿತು ಚರ್ಚಿಸಲಾಗಿದೆ ಎಂದರು.

ಎಂಜಿನೀಯರ್ ಗಳ ಸಾಮೂಹಿಕ ವರ್ಗಾವಣೆ ನಡೆಯುತ್ತಿತ್ತು. ಈ ಕುರಿತು ಚರ್ಚಿಸಲಾಗಿದೆ. ಅದನ್ನು ಮರೆಯಲಾಗುವುದಿಲ್ಲ. ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಸೇತಿದಂತೆ ಕಾಂಗ್ರೆಸ್ ದುರಾಡಳಿತವನ್ನು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss