Thursday, July 7, 2022

Latest Posts

ನಾಡ ಶಕ್ತಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳೂ ಆದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನವನ್ನು ಪಡೆದರು.
ಸೋಮವಾರ ರಾತ್ರಿ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದ ಅವರು, ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು. ಮಂಗಳವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಅವರಿಗೆ ಮೈಸೂರು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸುನಂದಾ ಪಾಲನೇತ್ರ ಅವರು ಸ್ವಾಗತಿಸಿದರು ಬಳಿಕ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿದ ಅರುಣ್ ಸಿಂಗ್ ಅವರು, ನಾಡ ಅಧಿದೇವತೆಯಾದ ಚಾಮುಂಡೇಶ್ವರಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿ, ನಾಡು, ದೇಶ ಕೊರೋನಾದಿಂದ ಮುಕ್ತವಾಗಿ, ಸುಖ, ಶಾಂತಿ, ಸಮೃದ್ಧಿ ನೆಲಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಅಧ್ಯಕ್ಷ ಕೌಟಿಲ್ಯ ಆರ್.ರಘು, ಜಂಗಲ್ ಲಾಡ್ಜ್ ಅಧ್ಯಕ್ಷ ಅಪ್ಪಣ್ಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜೋಗಿ ಮಂಜು, ಮಾಧ್ಯಮ ಸಂಚಾಲಕ ಪ್ರದೀಪ್‌ಕುಮಾರ್, ಜಯರಾಮ್, ದೇವರಾಜಗೌಡ, ಮಂಜು ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss