Wednesday, July 6, 2022

Latest Posts

ಅರುಣ್ ಸಿಂಗ್ ಅವರ ಕರ್ನಾಟಕ ಪ್ರವಾಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಡಿ. 27ರಿಂದ 29ರವರೆಗೆ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದಾರೆ.

ಇಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು. ನಾಳೆ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ವಿವಿಧ ಬೈಠಕ್‍ಗಳಲ್ಲಿ ಅವರು ಭಾಗವಹಿಸುತ್ತಾರೆ. ಡಿ. 29ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡುವರು. ಅಂದು ರಾತ್ರಿ 9.35ಕ್ಕೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು ಎಂದು ರಾಜ್ಯ ಬಿಜೆಪಿ ಪ್ರಕಟಣೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss