ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿ ತನ್ನ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನವೇ ಕೈ ಪಾಳಯಕ್ಕೆ ಬಿಸಿ ಮುಟ್ಟಿದೆ.
ಹೌದು ಎಂದಿದ್ದಾರೆ ಕಾಂಗ್ರೆಸ್ ಪಕ್ಷದ ಮೂಲಗಳು. ಮೂವರು ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಬೆನ್ನಿಗೇ ತುಕಿ ತನ ರಾಜಿನಾಮೆ ಪತ್ರವನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ರವಾನಿಸಿದ್ದಾರೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಎಪಿಸಿಸಿ ಪ್ರಧಾನ ಕಾರ್ಯದರ್ಶಿ ಗ್ಯಾಮರ್ ತಾನಾ, ಶಾಸಕರು ಬೇರೆ ರಾಜಕೀಯ ಪಕ್ಷಗಳಿಗೆ ಪಕ್ಷಾಂತರ ಮಾಡುವುದನ್ನು ತಡೆಯಲು ಸಾಧ್ಯವಾಗದ ಕಾರಣ ನೈತಿಕ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ತುಕಿ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಪೂರ್ವ ಸಿಯಾಂಗ್ ಜಿಲ್ಲೆಯ ಮೆಬೊ ಶಾಸಕರಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಲೊಂಬೊ ತಾಯೆಂಗ್, ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿನ್ ಲೋವಾಂಗ್ಡಾಂಗ್ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.