ಅರುಣಾಚಲ ಪ್ರದೇಶ, ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ: ದಿನಾಂಕ ಪರಿಷ್ಕರಿಸಿದ ಆಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಚುನಾವಣಾ ಆಯೋಗ ಪರಿಷ್ಕರಿಸಿದ್ದು, ಜೂ.4ರಂದು ನಡೆಯಬೇಕಿದ್ದ ಎಣಿಕೆ ಜೂ.2ಕ್ಕೆ ನಡೆಯಲಿದೆ.
ಭಾನುವಾರ ಈ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ.
ಇಲ್ಲಿನ ಎರಡೂ ವಿಧಾನಸಭೆಗಳ ಅವಧಿ ಜೂ.2ರಂದು ಕೊನೆಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸಂವಿಧಾನದ 324 ನೇ ವಿಧಿ, 172 (1) ಮತ್ತು 1951 ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 15 ರ ಪ್ರಕಾರ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸುವುದು ಅಗತ್ಯವಾಗಿದೆ ಎಂದು ಚುನಾವಣಾ ಆಯೋಗ ಉಲ್ಲೇಖಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!