ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕ್ಷಮೆಯಾಚಿಸಿದ್ದಾರೆ. ಅರವಿಂದ್ ಬೆಲ್ಲದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.
ದಿನಾಂಕ: 08/24/2024 ಶನಿವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಜಿಂದಾಲ್ ಕಂಪನಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾನು ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ಹೇಳಿರುತ್ತೇನೆ ಆ ಸಮಯದಲ್ಲಿ ಆ ಪದವನ್ನು ಬಳಸಲು ನನಗೆ ಶೋಭೆ ತಂದಿರುವುದಿಲ್ಲ, ಆದ್ದರಿಂದ ನಾನು ಈ ಪತ್ರದ ಮೂಲಕ ಅವರಲ್ಲಿ ಕ್ಷಮೆಯಾಚಿಸುತ್ತೇನೆ.” ಎಂದು ಪತ್ರ ಬರೆದಿದ್ದಾರೆ.