ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಜಾರಿ ವೇಳೆ ಹಗರಣದಲ್ಲಿ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನನ್ನು ಸಿಬಿಐ ಇಂದು ಔಪಚಾರಿಕವಾಗಿ ಅರೆಸ್ಟ್ ಮಾಡಿದ್ದಾರೆ.
ಇತ್ತ ಮತ್ತೊಂದೆಡೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್ ಹಿಂಪಡೆದಿದ್ದಾರೆ.
ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಜ್ರಿವಾಲ್ ಗೆ ನ್ಯಾ. ಮನೋಜ್ ಮಿಶ್ರಾ ಮತ್ತು ಎಸ್‌ವಿಎನ್ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್ ಅವೆನ್ಯೂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್ ಶುಕ್ರವಾರ (ಜೂನ್ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು ಎಂಬುದಾಗಿ ಕೋರ್ಟ್ ಹೇಳಿತ್ತು. ಅದೂ ಅಲ್ಲದೇ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.