ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ.
ಇಂದು ನಡೆದ ವಿಚಾರಣೆಯಲ್ಲಿ ಕೇಜ್ರಿವಾಲ್ ಅವರ ಜಾಮೀನಿನ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಆಗಸ್ಟ್ 14 ರಂದು ಜಾಮೀನು ಅರ್ಜಿಯನ್ನು ಪರಿಗಣಿಸಿದಾಗ ಮಧ್ಯಂತರ ಜಾಮೀನು ನಿರಾಕರಿಸಿತು. ನಂತರ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿತ್ತು.
ಕೇಂದ್ರೀಯ ತನಿಖಾ ದಳ (ಸಿಬಿಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಮತ್ತು ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ವಾದವನ್ನು ಆಲಿಸಿದರು.
‘ಸಹಾಯಕ್ಕಾಗಿ ಧನ್ಯವಾದಗಳು. ತೀರ್ಪನ್ನು ಕಾಯ್ದಿರಿಸಲಾಗಿದೆ’ ಎಂದು ವಕೀಲರು ತಮ್ಮ ವಾದವನ್ನು ಮುಕ್ತಾಯಗೊಳಿಸಿದ ನಂತರ ಪೀಠವು ಹೇಳಿದೆ.