ಅರವಿಂದ್ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು. ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಗೆ ಇಡಿ ಆಕ್ಷೇಪ ವ್ಯಕ್ತಪಡಿಸಿತ್ತು. ಅರ್ಜಿ ವಿಚಾರಣೆಗೆ ನಡೆಸಿದ ಕೋರ್ಟ್‌ ತೀರ್ಪನ್ನು ಕಾಯ್ದಿರಿದೆ.

ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ (K Kavitha) ಮತ್ತು ಆಮ್ ಆದ್ಮಿ ಪಕ್ಷದ (Aam Admi Party) ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!