ಅರವಿಂದ್ ಕೇಜ್ರಿವಾಲ್ ತನಿಖೆಗೆ ಸಹಕರಿಸುತ್ತಿಲ್ಲ: ಇಡಿ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೆರಡು ವಾರ ತಿಹಾರ್ ಜೈಲಿನಲ್ಲಿ ಕಾಲ ಕಳೆಯಬೇಕಿದೆ. ಸ್ಥಳೀಯ ನ್ಯಾಯಾಲಯವೂ ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ .

ಇಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಮುಂದೆ ಇಂದು ಕೇಜ್ರಿವಾಲ್ ಅವರನ್ನು ಹಾಜರುಪಡಿಸಲಾಗಿತ್ತು. ಇನ್ನು ಕೇಜ್ರಿವಾಲ್‌ ಇಡಿ ಅಧಿಕಾರಿಗಳ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ. ಅವರು ತನಿಖೆಗೆ ಸಹಕರಿಸುತ್ತಿಲ್ಲ, ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ಕೆಲವು ಡಿಜಿಟಲ್ ಡಿವೈಸ್‌ಗಳ ಪಾಸ್‌ವರ್ಡ್‌ಗಳನ್ನು ಅವರು ನೀಡುತ್ತಿಲ್ಲ ಎಂದು ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.

ತನಿಖೆಗೆ ಕೇಜ್ರಿವಾಲ್ ಸಹಕರಿಸಿದ ಹಿನ್ನೆಲೆಯಲ್ಲಿ ದೆಹಲಿ ಅಬಕಾರಿ ಹಗರಣದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಕೇಂದ್ರಿಯ ತನಿಖಾ ಸಂಸ್ಥೆಗಳು ಮುಂದೆ ಮತ್ತೊಮ್ಮೆ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯಲೂಬಹುದು ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಇತರ ಎಎಪಿ ಸದಸ್ಯರ ವಿರುದ್ಧ ಸುಳ್ಳು ಸಾಕ್ಷ್ಯಗಳನ್ನು ನೀಡಿದ್ದಾರೆ. ಅವರ ಸ್ವಂತ ಪಕ್ಷದ ನಾಯಕರ ಹೇಳಿಕೆಗಳನ್ನೇ ಎದುರಿಸಿದಾಗ ಅವರು ಗೊಂದಲಕ್ಕೊಳಗಾಗಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅನುಮೋದಕರಾಗಿ ಮಾರ್ಪಟ್ಟಿರುವ ಎಎಪಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರು ತಮಗೆ ಈ ಬಗ್ಗೆ ವರದಿ ಮಾಡಿಲ್ಲಆದರೆ ಸಚಿವರಾದ ಅತಿಶಿ ಹಾಗೂ ಭಾರದ್ವಾಜ್ ಅವರಿಗೆ ವರದಿ ಮಾಡಿದ್ದಾರೆ ಎಂದು ಕೇಜ್ರಿವಾಲ್ ತನಿಖೆ ವೇಳೆ ಹೇಳಿದ್ದಾರೆ ಎಂದು ಇಡಿ ಆರೋಪಿಸಿದೆ.

ಇತ್ತ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಕರೆದೊಯ್ಯುವ ಮೊದಲು ಕೋರ್ಟ್ ಅವರಣದಲ್ಲೇ ಪತ್ನಿ ಸುನೀತಾ ಕೇಜ್ರಿವಾಲ್ ಹಾಗೂ ದೆಹಲಿ ಸರ್ಕಾರದ ಸಚಿವರಾದ ಅತಿಶಿ ಹಾಗೂ ಸೌರಭ್ ಭಾರದ್ವಾಜ್ ಅವರನ್ನು ಭೇಟಿ ಮಾಡಲು ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!