ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಮಾರು ಆರು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ ಇಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
“ಮೊದಲನೆಯದಾಗಿ, ನಾನು ಯಾರ ಆಶೀರ್ವಾದದಿಂದ ಇಲ್ಲಿ ನಿಂತಿದ್ದೇನೆಯೋ ಆ ದೇವರಿಗೆ ನಾನು ಧನ್ಯವಾದ ಹೇಳುತ್ತೇನೆ. ಈ ಭಾರಿ ಮಳೆಯಲ್ಲಿ ಇಲ್ಲಿಗೆ ಆಗಮಿಸಿದ ಲಕ್ಷಾಂತರ ಕೋಟಿ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಕೇಜ್ರಿವಾಲ್ ಅವರು ಗಂಟೆಗಳ ಕಾಲ ತನಗಾಗಿ ಕಾಯುತ್ತಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಬಲಿಗರನ್ನು ಉದ್ದೇಶಿಸಿ ಹೇಳಿದರು.
ಈ ವೇಳೆ ಅವರಿಗೆ ಸುರಿಯುವ ಮಳೆಯಲ್ಲೂ ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಗಿದೆ. ಹಿರಿಯ ನಾಯಕರು ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕೇಜ್ರಿವಾಲ್ ಅವರನ್ನು ಬರಮಾಡಿಕೊಂಡರು.