Saturday, August 13, 2022

Latest Posts

ಮುಂದಿನ 3 ತಿಂಗಳಲ್ಲಿ ದೆಹಲಿಯ ಎಲ್ಲರಿಗೂ ಲಸಿಕೆ: ಅರವಿಂದ್‌ ಕೇಜ್ರಿವಾಲ್‌

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಸರ್ಕಾರ ಪ್ರತಿ ತಿಂಗಳು 85 ಲಕ್ಷ ಕೋವಿಡ್‌ ಲಸಿಕೆ ಡೋಸೆಜ್‌ಗಳನ್ನು ಪೂರೈಕೆ ಮಾಡಿದರೆ ಮುಂದಿನ 3 ತಿಂಗಳಲ್ಲಿ ದೆಹಲಿಯ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.
ದೆಹಲಿಯಲ್ಲಿ ಪ್ರತಿದಿನ ಸುಮಾರು 1 ಲಕ್ಷ ಡೋಸ್ ಲಸಿಕೆಗಳನ್ನು ನೀಡಲಾಗುತ್ತಿದ್ದು, ಈ ಪ್ರಮಾಣವನ್ನು 3 ಲಕ್ಷಕ್ಕೆ ಹೆಚ್ಚಿಸಬೇಕಿದೆ ಎಂದು ಅವರು ಶನಿವಾರ ಮಾಹಿತಿ ನೀಡಿದರು.
ದೆಹಲಿಯಲ್ಲಿ ಲಸಿಕೆ ನೀಡುವ ವ್ಯವಸ್ಥೆ ಉತ್ತಮವಾಗಿರುವುದರಿಂದ ಪಕ್ಕದ ನಗರಗಳಾದ ಫರಿದಾಬಾದ್, ಗಾಜಿಯಾಬಾದ್, ಸೋನಿಪತ್, ಗುರುಗ್ರಾಮ, ನೋಯ್ಡಾದಿಂದ ಬಹಳಷ್ಟು ಜನರು ಬಂದು ಕೋವಿಡ್‌ ಲಸಿಕೆ ಪಡೆಯುತ್ತಿದ್ದಾರೆ. ಆದರೆ ನಮ್ಮಲ್ಲಿ ಅಗತ್ಯವಾಕ್ಕೆ ಬೇಕಿರುವಷ್ಟು ಲಸಿಕೆಗಳು ಇಲ್ಲ, ಕೇಂದ್ರ ಸರಿಯಾದ ಪ್ರಮಾಣದಲ್ಲಿ ಲಸಿಕೆಗಳನ್ನು ಪೂರೈಕೆ ಮಾಡಿದರೆ ನಾವು ಮೂರು ತಿಂಗಳಲ್ಲಿ ಎಲ್ಲರಿಗೂ ಲಸಿಕೆ ಹಾಕಬಹುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss