ಅರವಿಂದ್​ ಕೇಜ್ರಿವಾಲ್ ಬಂಧನ: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ದೆಹಲಿ ಸಿಎಂ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿ ಬಂಧಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೆಶನಾಲಯದ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಸಮನ್ಸ್​ ಜಾರಿ ಮಾಡಿ ವಶಕ್ಕೆ ಪಡೆದಿದ್ದಾರೆ.

ದೆಹಲಿ ಹೈಕೋರ್ಟ್ ಕೇಜ್ರಿವಾಲ್​ ರಕ್ಷಣೆಯನ್ನು ನಿರಾಕರಿಸಿದ ಬೆನ್ನಲ್ಲೇ ಅವರ ವಕೀಲರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ತುರ್ತು ವಿಚಾರಣೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹೈಕೋರ್ಟ್ ಆದೇಶದ ವಿರುದ್ಧ ಆಮ್ ಆದ್ಮಿ ಪಕ್ಷದ ಸಂಚಾಲಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!