ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ನಿರಾಸೆಯಾಗಿದ್ದು, ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಮಂಗಳವಾರ ದೆಹಲಿ ಹೈಕೋರ್ಟ್ ರದ್ದು ಮಾಡಿದೆ.
ಇದರಿಂದಾಗಿ, ಅರವಿಂದ್ ಕೇಜ್ರಿವಾಲ್ ಇನ್ನೂ ಕೆಲ ದಿನಗಳ ಕಾಲ ತಿಹಾರ್ ಜೈಲಿನಲ್ಲಿಯೇ ಉಳಿಯಬೇಕಾಗಿದೆ. ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಬಾರದು ಎನ್ನುವ ಉದ್ದೇಶದಲ್ಲಿ ಇಡಿ ಸಲ್ಲಿಕೆ ಮಾಡಿರುವ ವಿವರವಾದ ದಾಖಲಾತಿಯನ್ನು ವಿಚಾರಣಾ ಕೋರ್ಟ್ ಪರಿಗಣನೆಗೆ ಮಾಡಿಕೊಳ್ಳಬೇಕಿತ್ತು. ಅದನ್ನು ಪರಿಗಣನೆ ಮಾಡದೇ ಜಾಮೀನು ನೀಡಿರುವುದು ತಪ್ಪು ಎಂದು ಕೋರ್ಟ್ ಹೇಳಿದೆ.
ಈಗ ರದ್ದುಗೊಂಡಿರುವ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮತ್ತೆ ತಡೆಹಿಡಿದಿದೆ.