ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ: ದಿಲ್ಲಿಯಲ್ಲಿ ‘ಕೈ’ಗೆ ಭಾರೀ ಹಿನ್ನೆಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಗೆ ಹಿನ್ನೆಡೆ ಆಗಿದೆ.

ಪಕ್ಷದ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿದ್ದಾರೆ. ಅರವಿಂದರ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಕಾಂಗ್ರೆಸ್ ವಿರುದ್ಧದ ಭ್ರಷ್ಟಾಚಾರದ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಆರೋಪದ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗೆ ಮೈತ್ರಿಗೆ ವಿರುದ್ಧವಾಗಿದೆ ಎಂದು ಬರೆದಿದ್ದಾರೆ. ಆದರೆ, ದೆಹಲಿಯಲ್ಲಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷ ನಿರ್ಧರಿಸಿದೆ.

ದೆಹಲಿ ಕಾಂಗ್ರೆಸ್ ಶಿಸ್ತು ಸಮಿತಿ ಸಭೆಯ ನಂತರ ದೆಹಲಿಯ ಮಾಜಿ ಸಚಿವ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸದಸ್ಯ ರಾಜ್‌ಕುಮಾರ್ ಚೌಹಾಣ್ ಪಕ್ಷವನ್ನು ತೊರೆದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!