ಆರ್ಯ-ಸಿಂಗ್ ಅಬ್ಬರದ ಬ್ಯಾಟಿಂಗ್ : ಕೋಲ್ಕತ್ತಾ ಗೆಲುವಿಗೆ 202 ರನ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್; 

ಪ್ರಿಯಾಂಶ್​ ಆರ್ಯ ಹಾಗೂ ಪ್ರಭಸಿಮ್ರನ್​ ಸಿಂಗ್ ಅಬ್ಬರದ ಬ್ಯಾಟಿಂಗ್ ನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 201 ರನ್​ಗಳಿಸಿದೆ. 202 ರನ್​ಗಳ ಗುರಿ ನೀಡಿದೆ.

ಪ್ರಭಸಿಮ್ರನ್ ಸಿಂಗ್ 49 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್​ಗಳ ಸಹಿತ 83 ರನ್​ಗಳಿಸಿದರೆ, ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 8 ಬೌಂಡರಿ, 4 ಸಿಕ್ಸರ್​ಗಳ ಸಹಿತ 69 ರನ್​ಗಳಿಸಿದರು. ಶ್ರೇಯಸ್ ಅಯ್ಯರ್ 16 ಎಸೆತಗಳಲ್ಲಿ ತಲಾ 1 ಬೌಂಡರಿ, ಸಿಕ್ಸರ್ ಸಹಿತ ಅಜೇಯ 25 ರನ್​ಗಳಿಸಿದರು.

ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೆ ಬ್ಯಾಟಿಂಗ್ ವಿಫಲವಾಗಿದ್ದು, 7 ರನ್ ಗೆ ಔಟಾಗಿದ್ದಾರೆ . ಮಾರ್ಕೊ ಜಾನ್ಸೆನ್ ಕೇವಲ 3 ರನ್ ಗಳಿಸಿ ನಿರಾಸೆ ಮೂಡಿಸಿದರು.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!