ಭಾರತೀಯಳಾಗಿ ದೇಶದ ಬೆಳವಣಿಗೆಗೆ ಸಾಕ್ಷಿಯಾಗಲು ಹೆಮ್ಮೆಯಾಗುತ್ತೆ: ಮೋದಿ ರಿಯಾಕ್ಟ್ ಗೆ ರಶ್ಮಿಕಾ ಮಂದಣ್ಣ ಖುಷಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮುಂಬೈನ ಅಟಲ್ ಸೇತು ಬಗ್ಗೆ ರಶ್ಮಿಕಾ ಮಂದಣ್ಣ ಹಾಡಿ ಹೊಗಳಿದ್ದು, ಇದಕ್ಕೆ ಖುದ್ದು ಪ್ರಧಾನಿ ನರೇಂದ್ರ ಧನ್ಯವಾದ ತಿಳಿಸಿದ್ದರು.

ಇದೀಗ ಅವರ ಧನ್ಯವಾದಕ್ಕೆ ನಟಿ ಮರು ಪ್ರತಿಕ್ರಿಯೆ ನೀಡಿದ್ದು, ನರೇಂದ್ರ ಮೋದಿ ರಿಯಾಕ್ಟ್ ಮಾಡಿರುವುದಕ್ಕೆ ಖುಷಿಪಟ್ಟಿದ್ದಾರೆ.

ರಶ್ಮಿಕಾ ಮಂದಣ್ಣ ಹಾಕಿದ್ದ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದ ಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಇದಕ್ಕೆ ನಟಿ ರಿಯಾಕ್ಟ್ ಮಾಡಿದ್ದು, ‘ಸರ್, ಒಬ್ಬ ಹೆಮ್ಮೆಯ ಯುವ ಭಾರತೀಯಳಾಗಿ ನಮ್ಮ ದೇಶದ ಬೆಳವಣಿಗೆಗೆ ಸಾಕ್ಷಿಯಾಗಲು ಹೆಮ್ಮೆಯಾಗುತ್ತದೆ’ ಎಂದು ಹೇಳಿದ್ದಾರೆ.

https://x.com/iamRashmika/status/1791391984269070717?ref_src=twsrc%5Etfw%7Ctwcamp%5Etweetembed%7Ctwterm%5E1791391984269070717%7Ctwgr%5E43107975d36b840c81039ef2792613bca17d0f4c%7Ctwcon%5Es1_&ref_url=https%3A%2F%2Fpublictv.in%2Fpushpa-actress-rashmika-mandanna-happy-with-pm-narendra-modis-response%2F

ರಶ್ಮಿಕಾ ಮಂದಣ್ಣ ಹೇಳಿದ್ದೇನು?
ಈಚೆಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್ ಸೇತು (ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಹೆಮ್ಮೆಯಿಂದ ಮಾತನಾಡಿದ್ದರು.ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!