ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರು ನೇಮಕಗೊಂಡಿದ್ದು, ಮೇ.15 ರಂದು ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮೇ 14 ರಂದು ಹಾಲಿ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅಧಿಕಾರ ಪೂರ್ಣಗೊಳಿಸಲಿದ್ದಾರೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ರಾಜೀವ್ ಕುಮಾರ್ ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡಿದ್ದಾರೆ. 36 ವರ್ಷಗಳಿಗೂ ಹೆಚ್ಚು ಕಾಲ ಭಾರತ ಸರ್ಕಾರದ ಸೇವೆಯ ಅಪಾರ ಅನುಭವ ಹೊಂದಿದ್ದಾರೆ. ಕಾನೂನು ಸಚಿವ ಕಿರಣ್ ರಿಜಿಜು ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜೀವ್ ಕುಮಾರ್‌ ಗೆ ಶುಭ ಹಾರೈಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!