April 12, 2026
Sunday, April 12, 2026
spot_img

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಇರುವವರೆಗೂ ಒಂದು ಇಂಚು ಭೂಮಿಯನ್ನು ಯಾರೂ ಕಬಳಿಸಲಾರರು: ಅಮಿತ್ ಶಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಸ್ಸಾಂ ಚುನಾವಣಾ ಅಖಾಡದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಮತ್ತೊಮ್ಮೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಸ್ಸಾಂ ಜನರ ಕುರಿತು ನೆಹರು-ಗಾಂಧಿ ಕುಟುಂಬ ಎಂದಿಗೂ ಕಾಳಜಿ ವಹಿಸಲಿಲ್ಲ ಎಂದು ಗುಡುಗಿದರು.

ರ್ಯಾಲಿಯನ್ನುದ್ದೇಶಿಸಿ ಮಾತನಾಡಿರುವ ಅವರು, ಅಂದು 1962ರಲ್ಲಿ ಚೀನಾ ದಾಳಿ ಮಾಡಿದ್ದ ಸಮಯದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅಸ್ಸಾಂ ಜನರ ಜೊತೆ ನಿಲಲಿಲ್ಲ. ಆದರೆ ಅಸ್ಸಾಂ ಭಾರತದ ಅಸ್ತಿ. ಇಲ್ಲಿ ಬಿಜೆಪಿ ಸರ್ಕಾರ ಇರುವವರೆಗೂ ಒಂದು ಇಂಚು ಭೂಮಿಯನ್ನು ಸಹ ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗುಡುಗಿದರು.

ಇಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಮತ್ತು ಶಾಂತಿಯನ್ನು ಸ್ಥಾಪಿಸಿದೆ . ಆದರೆ ಕಾಂಗ್ರೆ ಕಳೆದ 60 ವರ್ಷಗಳಲ್ಲಿ ಮೂರು ಸೇತುವೆ ನಿರ್ಮಿಸಿತು. ಬಿಜೆಪಿ 10 ವರ್ಷಗಳಲ್ಲಿ ಅಸ್ಸಾಂನಲ್ಲಿ ನಾಲ್ಕು ಅತಿದೊಡ್ಡ ಸೇತುವೆಗಳನ್ನು ನಿರ್ಮಿಸಲಾಗಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !