ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ ಆಂಜನೇಯ ಎಂಬ ಕುರಿಗಾಹಿಯ 90 ಹಾಗೂ ಓಬಣ್ಣ ಎಂಬವರ 16 ಕುರಿಗಳು ಸೇರಿದಂತೆ ಒಟ್ಟು 106 ಕುರಿಗಳು ಸಿಡಿಲಿಗೆ ಬಲಿಯಾಗಿವೆ.
ಈ ಘಟನೆಯಿಂದಾಗಿ ಕುರಿಗಾಹಿಗಳಿಗೆ ಅಪಾರ ನಷ್ಟವಾಗಿದೆ. ಜೀವನೋಪಾಯಕ್ಕೆ ದಾರಿಯಾಗಿದ್ದ ಕುರಿಗಳ ಸಾವಿನಿಂದಾಗಿ ಕುರಿಗಾಹಿಗಳು ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.