ಪ್ರತಿಜ್ಞೆಯಂತೆ 31 ತಿಂಗಳ ನಂತರ ಆಂಧ್ರ ಸಿಎಂ ಆಗಿಯೇ ವಿಧಾನಸಭೆಗೆ ಬಂದ ಚಂದ್ರಬಾಬು ನಾಯ್ಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ‘ತನ್ನ ಕುಟುಂಬಕ್ಕೆ ಅವಮಾನವಾಗಿದೆ’ ಎಂದು ಸದನದಿಂದ ಹೊರಬಂದ 31 ತಿಂಗಳ ನಂತರ ಇಂದು ಆಂಧ್ರ ಪ್ರದೇಶ ವಿಧಾನಸಭೆಗೆ ಮರಳಿದ್ದಾರೆ.

ನಾಯ್ಡು ಅವರು ನವೆಂಬರ್ 2021 ರಲ್ಲಿ ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಹಿಂತಿರುಗುವುದಾಗಿ ಪ್ರತಿಜ್ಞೆ ಮಾಡಿದ್ದರು, ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಪ್ರಚಂಡ ಗೆಲುವು ದಾಖಲಿಸಿ ಅವರು ಪ್ರತಿಜ್ಞೆಯನ್ನು ಪಾಲಿಸಿದ್ದಾರೆ.

175 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಡಿಪಿ 135 ಸ್ಥಾನಗಳನ್ನು ಗೆದ್ದರೆ, ಅವರ ಮಿತ್ರಪಕ್ಷಗಳಾದ ಜನಸೇನಾ ಮತ್ತು ಬಿಜೆಪಿ ಕ್ರಮವಾಗಿ 21 ಮತ್ತು 8 ಸ್ಥಾನಗಳನ್ನು ಗೆದ್ದಿವೆ. ನಾಯ್ಡು ಅವರು ಇಂದು  ಮುಖ್ಯಮಂತ್ರಿಯಾಗಿ ಕಾಲಿಡುತ್ತಿದ್ದಂತೆ ಅವರಿಗೆ ಆತ್ಮೀಯ ಸ್ವಾಗತ ನೀಡಲು ಇಡೀ ಸದನ ಎದ್ದು ನಿಂತಿದೆ.ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇದು ನಾಲ್ಕನೇ ಅವಧಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!