Thursday, March 23, 2023

Latest Posts

ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ : ಬಿ.ಎಸ್‌ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಿವಮೊಗ್ಗದಲ್ಲಿ ನಡೆಯುತ್ತಿರುವ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಷಣ ಮಾಡಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.

ಇಡೀ ವಿಶ್ವವೇ ಮೆಚ್ಚಿರುವ ಆದರ್ಶ ನಾಯಕ ಪ್ರಧಾನಿ ಮೋದಿ. ಅವರು ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟಿಸಿರುವುದು ನನಗೆ ಸಂತಸ ತಂದಿದೆ. ಅವರು ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ಮುಖ್ಯವಾಗಿದೆ, ಏಕೆಂದರೆ ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ದಿನ ಎಂದರು.

ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ. ಈ ಸಂದರ್ಭದಲ್ಲಿ ಶಿಕಾರಿಪುರದ ಜನತೆಗೂ ಧನ್ಯವಾದಗಳನ್ನು ಸಲ್ಲಿಸಿದರು.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!