ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರೋಗ್ಯ ಸಚಿವರ ಸಂಧಾನ ವಿಫಲವಾಗಿದ್ದು ಕೊರೆಯುವ ಚಳಿಯಲ್ಲೂ ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ( ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು. ಆದರೆ ಸಚಿವರ ಭರವಸೆ ಒಪ್ಪದ ಕಾರ್ಯಕರ್ತರು ಕನಿಷ್ಠ 15 ಸಾವಿರ ರೂ. ಗೌರವಧನ ನೀಡುವಂತೆ ಪಟ್ಟು ಹಿಡಿದಿದ್ದಾರೆ. ತಮ್ಮ ಬೇಡಿಕೆ ಈಡೇರುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಹೇಳಿದ್ದಾರೆ.
ಬೆಳಗಿನ ಜಾವವೂ ಅತಿಯಾದ ಚಳಿ ಇದ್ದು, ಮಕ್ಕಳ ಸಮೇತ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದ್ದಾರೆ.