October 18, 2026
Sunday, October 18, 2026
spot_img

ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರದ ಕಳೆ: ನಾಗಲಕ್ಷ್ಮೀಯಾದ ತಾಯಿಗೆ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ವಿಭಿನ್ನವಾದ ಸಂಭ್ರಮವೊಂದು ಮನೆಮಾಡಿದೆ. ಇಡೀ ಬೆಟ್ಟಕ್ಕೆ ಕಳೆಯೇ ಬದಲಾಗಿದ್ದು, ಬೆಳಗ್ಗೆಯಿಂದಲೇ ಜನರು ದೇವಿಯ ದರುಶನಪಡೆಯುತ್ತಿದ್ದಾರೆ.

ಇಡೀ ಬೆಟ್ಟಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ಮುಂಜಾನೆಯಿಂದಲೇ ವಿಶೇಷ ಪೂಜೆಗಳು ನಡೆಯುತ್ತಿದ್ದು, ತಾಯಿ ನಾಗಲಕ್ಷ್ಮೀ ಅವತಾರದಲ್ಲಿ ಕಂಗೊಳಿಸುತ್ತಿದ್ದಾರೆ. ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಬೆಟ್ಟದತ್ತ ತೆರಳುತ್ತಿದ್ದಾರೆ.

ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರಿಶನಕ್ಕೆ ಅವಕಾಶವಿದೆ.

Must Read