ಸರಕಾರಿ ನಿವಾಸಕ್ಕೆ ತೆರಳಲು ಆಷಾಢದ ಅಶುಭ?: ಸಿಎಂ ಸಿದ್ದರಾಮಯ್ಯ ವಿರುದ್ಧ ಚೇತನ್‌ ಕಿಡಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ತಿಂಗಳು ಕಳೆಯುತ್ತಾ ಬಂದಿದ್ದು,ಆದ್ರೂ ಇಲ್ಲಿಯವರೆಗೆ ಸರ್ಕಾರದ ಅಧಿಕೃತ ನಿವಾಸಕ್ಕೆ ತೆರಳಿಲ್ಲ . ಇದೀಗ ಈ ಕುರಿತು ನಟ ಅಹಿಂಸಾ ಚೇತನ್‌ ಕಿಡಿಕಾರಿದ್ದಾರೆ.

ಈ ಹಿಂದಿನ ಅವಧಿಯಲ್ಲಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಮೂಡನಂಬಿಕೆಗಳ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗಿದ್ದರು. ಆದರೆ, ಈಗ ಅವರೇ ಮೂಢನಂಬಿಕೆಗಳನ್ನು ಆಚರಣೆ ಮಾಡುತ್ತಿದ್ದಾರೆ. ಆಷಾಢ ಮಾಸವಿದ್ದ ಕಾರಣ ಈ ಮಾಸ ಅಶುಭವೆಂದು ಮನೆಯನ್ನು ಬದಲಿಸದೇ ಮುಂದಿನ ತಿಂಗಳಲ್ಲಿ ಮನೆ ಪ್ರವೇಶ ಮಾಡಲಿದ್ದಾರೆ. ಹೀಗಾಗಿ ನಟ ಅಹಿಂಸಾ ಚೇತನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಚೇತನ್‌ “ಆಷಾಢದ ‘ಅಶುಭ’ ಅವಧಿಯ ನಂತರ ಹೊಸ ಮನೆಗೆ ಶಿಫ್ಟ್ ಆಗಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ನಿಜವಾದ ವೈಜ್ಞಾನಿಕ ಚಿಂತಕನಿಗೆ ಇಂತಹ ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು? 2 ತಿಂಗಳ ಹಿಂದೆ ‘ದೇವರ’ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು ಈಗ ಆಷಾಢ ಅಸಂಬದ್ಧತೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಂದ್ರಯಾನ-3 ಇದರ ಕೆಲವು ವಿಜ್ಞಾನಿಗಳ ಬೂಟಾಟಿಕೆಯ ಜೊತೆಗೆ ಸ್ಪರ್ಧೆ ಮಾಡುತ್ತಿದ್ದಾರೆ?” ಎಂದು ಟೀಕೆ ಮಾಡಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿದಾಗ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಕ್ಕೆ ವಿರೋಧ ವ್ಯಕ್ತಪಡಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!