ಆ್ಯಶಸ್ ಸರಣಿ: ಮೂರನೇ ಟೆಸ್ಟ್ ನಲ್ಲಿ ಗೆದ್ದು ಸಂಭ್ರಮಿಸಿದ ಇಂಗ್ಲೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆ್ಯಶಸ್ ಸರಣಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ (England) ಜಯಭೇರಿ ಬಾರಿಸಿದೆ.

ಟಾಸ್ ಗೆದ್ದ ಬೆನ್ ಸ್ಟೋಕ್ಸ್ ಫೀಲ್ಡಿಂಗ್ ಆಯ್ದುಕೊಂಡಿ ದ್ದು ಅದರಂತೆ ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಡೇವಿಡ್ ವಾರ್ನರ್ (4) ಹಾಗೂ ಉಸ್ಮಾನ್ ಖ್ವಾಜಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಲ್ಯಾಬುಶೇನ್ (21) ಹಾಗೂ ಸ್ಟೀವ್ ಸ್ಮಿತ್ (22) ಕ್ರೀಸ್​ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಇದರ ನಡುವೆ ಟ್ರಾವಿಡ್ ಹೆಡ್ 39 ರನ್​ಗಳ ಕಾಣಿಕೆ ನೀಡಿದರು.ಆಸ್ಟ್ರೇಲಿಯಾವನ್ನು 263 ರನ್​ಗಳಿಗೆ ಆಲೌಟ್ಆಯಿತು.

ಇದಾದ ಬಳಿಕ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ.ಪ್ಯಾಟ್ ಕಮಿನ್ಸ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡವು 237 ರನ್​ಗಳಿಗೆ ಸರ್ವಪತನ ಕಂಡಿತು

ಮೊದಲ ಇನಿಂಗ್ಸ್​ನ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಶುರು ಮಾಡಿದ ಆಸ್ಟ್ರೇಲಿಯಾ ತಂಡವು ಈ ಬಾರಿ ಕೂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಕೇವಲ 94 ರನ್​ಗಳಿಸುವಷ್ಟರಲ್ಲಿ ಅಗ್ರ ನಾಲ್ವರು ಬ್ಯಾಟರ್​ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ 77 ರನ್​ ಚಚ್ಚಿದರು. ಪರಿಣಾಮ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ ಅನ್ನು ಕೇವಲ 223 ರನ್​ಗಳಿಗೆ ಅಂತ್ಯಗೊಳಿಸಿತು.

251 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆಯಿತು. ಝಾಕ್ ಕ್ರಾಲಿ ಹಾಗೂ ಬೆನ್ ಡಕೆಟ್ ಮೊದಲ ವಿಕೆಟ್​ಗೆ 42 ರನ್ ಪೇರಿಸಿದರು. ಈ ವೇಳೆ ದಾಳಿಗಿಳಿದ ಮಿಚೆಲ್ ಸ್ಟಾರ್ಕ್, ಡಕೆಟ್ (23) ವಿಕೆಟ್ ಪಡೆದರು. ಇದರ ಬೆನ್ನಲ್ಲೇ ಮೊಯೀನ್ ಅಲಿ (5) ಯನ್ನು ಕ್ಲೀನ್ ಬೌಲ್ಡ್ ಮಾಡಿದರು.

ಆ ಬಳಿಕ ಜೋ ರೂಟ್​ (21) ಗೆ ಪ್ಯಾಟ್​ ಕಮಿನ್ಸ್ ಪೆವಿಲಿಯನ್ ಹಾದಿ ತೋರಿಸಿದರೆ, ಅಪಕಾರಿಯಾಗಿ ಬ್ಯಾಟ್ ಬೀಸುತ್ತಿದ್ದ ಝಾಕ್ ಕ್ರಾಲಿ (44) ಯನ್ನು ಮಿಚೆಲ್ ಮಾರ್ಷ್ ಔಟ್ ಮಾಡಿದರು. ಇನ್ನು ತಂಡದ ಮೊತ್ತ 161 ಆಗಿದ್ದ ವೇಳೆ ಬೆನ್ ಸ್ಟೋಕ್ಸ್ (13) ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಇದರ ಬೆನ್ನಲ್ಲೇ ಜಾನಿ ಬೈರ್​ಸ್ಟೋವ್ (5) ಕೂಡ ಕ್ಲೀನ್ ಬೌಲ್ಡ್ ಆದರು.

171 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಇಂಗ್ಲೆಂಡ್ ತಂಡಕ್ಕೆ ಹ್ಯಾರಿ ಬ್ರೂಕ್ ಆಸರೆಯಾದರು. 67 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಬ್ರೂಕ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಭರವಸೆ ಮೂಡಿಸಿದರು.ಅಂತಿಮವಾ ಇಂಗ್ಲೆಂಡ್ ತಂಡಕ್ಕೆ 3 ವಿಕೆಟ್​ಗಳ ಗೆಲುವು ಸಾಧಿಸಿತು.

5 ಪಂದ್ಯಗಳ ಆ್ಯಶಸ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವು ಜಯ ಸಾಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!