January14, 2026
Wednesday, January 14, 2026
spot_img

ಆ್ಯಶಸ್ ಸರಣಿ ಆಸೀಸ್ ಪಾಲು: ಇಂಗ್ಲೆಂಡ್ ಮಣಿಸಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಾಂಗರೂ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ರೋಚಕ ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಆಸೀಸ್ ಪಡೆ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆಯೇ ಸರಣಿಯನ್ನು ತನ್ನ ವಶವಾಗಿಸಿಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ, ತನ್ನ ಮೊದಲ ಇನಿಂಗ್ಸ್‌ನಲ್ಲಿ 371 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ ಕೇವಲ 286 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 85 ರನ್‌ಗಳ ಹಿನ್ನಡೆ ಅನುಭವಿಸಿತು.

ದ್ವಿತೀಯ ಇನಿಂಗ್ಸ್‌ನಲ್ಲಿ ಸಾಂಘಿಕ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ 349 ರನ್ ಗಳಿಸಿ ಇಂಗ್ಲೆಂಡ್ ತಂಡಕ್ಕೆ ಜಯ ಸಾಧಿಸಲು 435 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಹೋರಾಟ ನಡೆಸಿದರೂ ಸಹ, ಅಂತಿಮವಾಗಿ 352 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ 82 ರನ್‌ಗಳ ಅಂತರದ ಗೆಲುವು ಸಂಭ್ರಮಿಸಿತು.

ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ತಲಾ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ, ಈಗ ಮೂರನೇ ಪಂದ್ಯದಲ್ಲೂ ಗೆದ್ದು 3-0 ಅಂತರದ ಅಜೇಯ ಮುನ್ನಡೆ ಸಾಧಿಸಿದೆ. ಸದ್ಯ ಆಸ್ಟ್ರೇಲಿಯಾ ತಂಡದ ಕಣ್ಣು ಉಳಿದ ಎರಡು ಪಂದ್ಯಗಳ ಮೇಲಿದ್ದು, ಇಂಗ್ಲೆಂಡ್ ತಂಡಕ್ಕೆ ವೈಟ್‌ವಾಶ್ ಭೀತಿ ಎದುರಾಗಿದೆ.

Most Read

error: Content is protected !!