Tuesday, August 16, 2022

Latest Posts

ಆಶಿಶ್ ಮಿಶ್ರಾ ಗೆ ಡೆಂಘೀ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಗೆ ಡೆಂಘೀ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಶುಕ್ರವಾರದಿಂದ ಜ್ವರದಿಂದ ಬಳಲುತ್ತಿದ್ದ ಆಶಿಶ್ ಗೆ ರಕ್ತ ತಪಾಸಣೆ ನಡೆಸಲಾಗಿತ್ತು. ಈ ಬಳಿಕ ಆಶಿಶ್ ಡೆಂಘೀ ಸೋಂಕಿನಿಂದ ಬಳಲುತ್ತಿರುವುದು ದೃಢಪಟ್ಟಿದೆ. ಹಾಗಾಗಿ ಆಶಿಶ್ ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಕ್ಟೋಬರ್‌ 3ರಂದು ಲಖೀಂಪುರ್‌ ನಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಹಾಗೂ ರಾಜ್ಯದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನಾ ನಿರತ ರೈತರ ಮೇಲೆ ಆಶಿಶ್‌ ಮಿಶ್ರಾ ಕಾರು ಹಾಯಿಸಿದ ಆರೋಪ ಎದುರಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss