ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಗುಲಾಬಿ ಕೊಟ್ಟ ಅಶೋಕ್, ಏನಿದರ ಉದ್ದೇಶ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಪಕ್ಷ ನಾಯಕ ಆರ್.ಅಶೋಕ್ ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಗುಲಾಬಿ ಹೂ ಅರ್ಪಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ.

ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!