Friday, December 9, 2022

Latest Posts

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಅಶೋಕ್ ಗೆಹ್ಲೋಟ್ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಕೊನೆಗೂ ಅಂತ್ಯ ಹೇಳುವ ಲಕ್ಷಣಗಳು ಇದೀಗ ಗೋಚರವಾಗುತ್ತಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ರೇಸ್‌ನಲ್ಲಿ ಧುಮುಕಿದ ಅಶೋಕ್ ಗೆಹ್ಲೋಟ್ ಇದೀಗ ಚುನಾವಣೆ ರೇಸ್‌ನಿಂದ ಹೊರಬಿದ್ದಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾದರೆ ರಾಜಸ್ಥಾನ ಸಿಎಂ ಸ್ಥಾನ ತ್ಯಜಿಸಬೇಕಾಗುತ್ತದೆ. ಸಿಎಂ ಸ್ಥಾನ ತ್ಯಜಿಸಿದರೆ ತನ್ನ ವಿರೋಧಿ ಬಣ ಸಚಿನ್ ಪೈಲೆಟ್ ಪಾಲಾಗಲಿದೆ. ಇದು ಅಶೋಕ್ ಗೆಹ್ಲೋಟ್‌ಗೆ ಇಷ್ಟವಿಲ್ಲ.ಇದೇ ಕಾರಣಕ್ಕೆ ಗೆಹ್ಲೋಟ್ ಬಣದ 92 ಶಾಸಕರನ್ನು ರಾಜೀನಾಮೆ ನಾಟಕವಾಡಿಸಿದ ಗೆಹ್ಲೋಟ್ ಇದೀಗ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಬಯಸಿದಂತೆ ಆಗಿದೆ.

ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹೊರಬಿದ್ದ ಕಾರಣ ಇದೀಗ ಶಶಿ ತರೂರ್ ಮುಂದಿನ ಅಧ್ಯಕ್ಷರಾಗಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಶಶಿ ತರೂರ್ ಇದೇ ತಿಂಗಳ 30 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಕಾಂಗ್ರೆಸ್ ಖಜಾಂಚಿ ಪವನ್ ಕುಮಾರ್ ಬನ್ಸಾಲ್ ಕೂಡ ಅಧ್ಯಕ್ಷೀಯ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತ ಹಿರಿಯ ನಾಯಕ ಮಲ್ಲಿಖಾರ್ಜುನ್ ಖರ್ಗೆ, ದಿಗ್ವಿಜಯ್ ಸಿಂಗ್ ಕೂಡ ಇದೀಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಈಗಾಗಲೇ ಕಾಂಗ್ರೆಸ್‌ನಲ್ಲಿ ಓರ್ವ ನಾಯಕನಿಗೆ ಒಂದು ಸ್ಥಾನ ಎಂದು ರಾಹುಲ್ ಗಾಂಧಿ ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ ಅಶೋಕ್ ಗೆಹ್ಲೋಟ್ಅನಿವಾರ್ಯವಾಗಿ ರಾಜಸ್ಥಾನ ಸಿಎಂ ಸ್ಥಾನದಿಂದ ರಾಜೀನಾಮೆ ನೀಡಲು ಸಜ್ಜಾಗಿದ್ದರು. ಆದರೆ ಗೆಹ್ಲೋಟ್ ರಾಜೀನಾಮೆ ನೀಡಿದರೆ ಸಿಎಂ ಸ್ಥಾನ ನೇರವಾಗಿ ಸಚಿನ್ ಪೈಲೆಟ್ ಪಾಲಾಗಲಿದೆ ಅನ್ನೋದು ಬಹುತೇಕ ಸ್ಪಷ್ಟವಾಗಿತ್ತು. ಇದಕ್ಕಾಗಿ ಅಶೋಕ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಅಧ್ಯಕ್ಷ ರೇಸ್‌ನಿಂದ ಹಿಂದೆಸರಿದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!